ಕಾಸರಗೋಡು ಭಾಷಾ ಅಲ್ಪಸಂಖ್ಯಾತರ ಪ್ರದೇಶವಾಗಿದ್ದು ಇಲ್ಲಿನ ಕನ್ನಡಿಗರುಇದರ ಸಾಂವಿಧಾನಿಕ ಹಕ್ಕನ್ನು ಪಡೆದವರಾಗಿರುವರು. ಆದರೂ ಇಲ್ಲಿನ ಕನ್ನಡಿಗರು ತಮ್ಮ ಹಕ್ಕುಗಳ ಸಂರಕ್ಷಣೆಗೆ ನಿರಂತರವಾಗಿ ಹೋರಾಟ ನಡೆಸುತ್ತಿದ್ದಾರೆ. ಈಗಲೂ ಒಂದಿಲ್ಲೊಂದು ಸಮಸ್ಯೆಗಳು ಉದ್ಭವಿಸುತ್ತಲೇ ಇವೆ. ಕಾಸರಗೋಡಿನ ಕನ್ನಡಿಗರ ಸಂಮಸ್ಯೆಗಳಿಗೆ ಸದಾ ಸ್ಪಂದಿಸುತ್ತಿರುವ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರವು ನಿರಂತರವಾಗಿ ಸಹಕಾರವನ್ನು ಕೊಟ್ಟಿರುತ್ತದೆ.
ಕಾಸರಗೋಡಿನ ಕನ್ನಡ ಮಾಧ್ಯಮ ಶಾಲೆಗಳ, ಅಧ್ಯಾಪಕರು ಹಾಗೂ ಮಕ್ಕಳ ಹೋರಾಟದ ಬದುಕಿಗೆ ಸದಾ ಸ್ಪಂದಿಸುತ್ತಿರುವ ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ನಿಯೋಗವು ಇಂದು ಕಾಸರಗೋಡು ಜಿಲ್ಲೆಗೆ ಆಗಮಿಸಿದ ಕರ್ನಾಟಕ ರಾಜ್ಯ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಸಿ ಸೋಮಶೇಖರರವರನ್ನು ಭೇಟಿಯಾಗಿ ಕಾಸರಗೋಡಿನ ಕನ್ನಡ ಮಾಧ್ಯಮ ಶಾಲೆಗಳ ಕುರಿತಾದ ಸಮಸ್ಯೆಗಳಿಗೆ ಸ್ಪಂದಿಸಲು ಮನವಿ ಸಲ್ಲಿಸಲಾಯಿತು. ಸಂಘಟನೆಯ ಅವಹಾಲನ್ನು ಸ್ವೀಕರಿಸಿದ ಮಾನ್ಯ ಸಿ ಸೋಮಶೇಖರರವರು ಧನಾತ್ಮಕವಾಗಿ ಸ್ಪಂದಿಸಿ, ಸೂಕ್ತ ಕ್ರಮಗಳ ಭರವಸೆಯನ್ನು ನೀಡಿರುತ್ತಾರೆ. ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಪರವಾಗಿ ಕೇಂದ್ರ ಸಮಿತಿಯ ಉಪಾಧ್ಯಕ್ಷೆ ಶ್ರೀಮತಿ ಪ್ರಭಾವತಿ ಕೆದಿಲಾಯ, ಉಪ ಕೋಶಾಧಿಕಾರಿ ಶರತ್ ಕುಮಾರ್, ಕುಂಬಳೆ ಉಪಜಿಲ್ಲಾ ಸಮಿತಿಯ ಕಾರ್ಯದರ್ಶಿ ಶ್ರೀಶ ಪಂಜಿತ್ತಡ್ಕ, ಕಾಸರಗೋಡು ಉಪಜಿಲ್ಲಾ ಸಮಿತಿಯ ಉಪಾಧ್ಯಕ್ಷ ಹರೀಶ ಎನ್, ಕೋಶಾಧಿಕಾರಿ ವೆಂಕಟಕೃಷ್ಣ ಕೆ ಉಪಸ್ಥಿತರಿದ್ದರು.
No comments:
Post a Comment