ಇಂದು ಕಾಸರಗೋಡು ಜಿಲ್ಲಾ ಶಿಕ್ಷಣ ಉಪ ನಿರ್ದೇಶಕರು ಕರೆದಂತಹ ವಿವಿಧ ಸಂಘಟನೆಯ ಪ್ರತಿನಿಧಿಗಳ ಸಭೆಯಲ್ಲಿ ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ನಿಲುವನ್ನು ಮಂಡಿಸಲಾಯಿತು.
ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘ (ರಿ.) ಇದರ ಕಾಸರಗೋಡು ಉಪಜಿಲ್ಲಾ ಘಟಕದ ಅಧ್ಯಕ್ಷರಾದ ವಿನೋದ್ ರಾಜ್ ಪಿ. ಕೆ ರವರು ಸಂಘಟನೆಯ ಪ್ರತಿನಿಧಿಯಾಗಿ ತೆರಳಿ, ಜಿಲ್ಲಾ ಶಿಕ್ಷಣ ಉಪ ನಿರ್ದೇಶಕರ ಮುಂದೆ ಸಂಘಟನೆಯ ನಿಲುವನ್ನು ಪ್ರಸ್ತಾಪಿಸಿದರು. ಮುಖ್ಯವಾಗಿ ಆದೂರು ಸರಕಾರಿ ಪ್ರೌಢ ಶಾಲೆಗೆ ಕನ್ನಡ ವಿಭಾಗಕ್ಕೆ ಕನ್ನಡೇತರ ಅಧ್ಯಾಪಕರ ನೇಮಕಾತಿಯ ಬಗ್ಗೆ ಪ್ರಸ್ತಾಪಿಸಲಾಯಿತು.
No comments:
Post a Comment