FLASH NEWS

ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಅಧಿಕೃತ ಬ್ಲಾಗ್ ಗೆ ಸುಸ್ವಾಗತ...

Saturday, 14 January 2023

ಕನ್ನಡ ಅಧ್ಯಾಪಕ ಸಂಘದ ರಜತ ಮಹೋತ್ಸವದ ಅಂಗವಾಗಿ ಅಧ್ಯಾಪಕರಿಗೆ ಸ್ಪರ್ಧೆಗಳು ; ಸಾರಾ ಅಬೂಬಕ್ಕರ್ ರವರಿಗೆ ನುಡಿ ನಮನ :

         ಕೇರಳದ ರಾಜ್ಯದ ಅತ್ಯಂತ ದೊಡ್ಡ ಕನ್ನಡ ಅಧ್ಯಾಪಕರ ಸಂಘಟನೆಯಾದ ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘವು ಬೆಳ್ಳಿ ಹಬ್ಬದ ಸಂಭ್ರಮದಲ್ಲಿದ್ದು, ಅದರಂಗವಾಗಿ ನಡೆಸುವ ರಜತ ಮಹೋತ್ಸವದ ಭಾಗವಾಗಿ ಕಾಸರಗೋಡು ಬೀರಂತಬೈಲಿನಲ್ಲಿರುವ ಕನ್ನಡ ಅಧ್ಯಾಪಕ ಭವನದಲ್ಲಿ ಕನ್ನಡ ಅಧ್ಯಾಪಕರಿಗೆ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಯಿತು. 

     ಕಾರ್ಯಕ್ರಮದಂಗವಾಗಿ ನಡೆದ ಸಭಾ ಕಾರ್ಯಕ್ರಮದಲ್ಲಿ ಕನ್ನಡ ಅಧ್ಯಾಪಕರ ಸಂಘದ ಕೇಂದ್ರ ಸಮಿತಿಯ ಅಧ್ಯಕ್ಷರಾದ ಶ್ರೀನಿವಾಸ ರಾವ್ ಅಧ್ಯಕ್ಷತೆ ವಹಿಸಿದ್ದರು. ಕೇಂದ್ರ ಸಮಿತಿಯ ಪೂರ್ವ ಅಧಿಕೃತ ವಕ್ತಾರರಾದ ವಿಶಾಲಾಕ್ಷ ಪುತ್ರಕಳ, ಕೋಶಾಧಿಕಾರಿ ಪದ್ಮಾವತಿ ಎಂ, ಸಂಘಟನಾ ಕಾರ್ಯದರ್ಶಿ ಪ್ರದೀಪ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. 

        ಇದೇ ಸಂದರ್ಭದಲ್ಲಿ ನಮ್ಮನ್ನು ಅಗಲಿದ ಕಾಸರಗೋಡಿನ ಹೆಮ್ಮೆಯ ಕನ್ನಡ ಸಾಹಿತಿ ಸಾರಾ ಅಬೂಬಕ್ಕರ್ ರವರಿಗೆ ನುಡಿ ನಮನ ಸಲ್ಲಿಸಲಾಯಿತು. ಕನ್ನಡ ಅಧ್ಯಾಪಕರ ಸಂಘದ ಮಂಜೇಶ್ವರ ಉಪಜಿಲ್ಲಾ ಘಟಕದ ಕಾರ್ಯದರ್ಶಿ ಕವಿತಾ ಕೂಡ್ಲುರವರು ಸಾರಾ ಅಬೂಬಕ್ಕರ್ ರ ಜೀವನ ಸಾಧನೆಯನ್ನು ಬಿಚ್ಚಿಟ್ಟು ಭಾವಪೂರ್ಣ ಶ್ರದ್ಧಾಂಜಲಿಯೊಂದಿಗೆ ನುಡಿ ನಮನ ಸಲ್ಲಿಸಿದರು.

        ಕನ್ನಡ ಅಧ್ಯಾಪಕರ ಸಂಘದ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಜಯಪ್ರಶಾಂತ್ ಪಾಲೆಂಗ್ರಿ ಸ್ವಾಗತಿಸಿ, ಕಾರ್ಯದರ್ಶಿ ಶ್ರೀಶ ಕುಮಾರ ಪಂಜಿತಡ್ಕ ವಂದಿಸಿದರು.

      ಬಳಿಕ ವಿವಿಧ ಸ್ಪರ್ಧೆಗಳು ನಡೆದವು. ಸಮಿತಿಯ ಸದಸ್ಯರು ಉಪಸ್ಥಿತರಿದ್ದು ಸಹಕರಿಸಿದರು.









         

No comments:

Post a Comment