ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ರಾಜ್ಯ ಸಮ್ಮೇಳನ ಹಾಗೂ ರಜತ ಮಹೋತ್ಸವದ ಅಂಗವಾಗಿ ಇಂದು ಸಂಘಟನಾ ಸಮಿತಿ ಸಭೆಯನ್ನು ನಡೆಸಲಾಯಿತು.
ಸಭೆಯ ಅಧ್ಯಕ್ಷತೆಯನ್ನು ಕೇಂದ್ರ ಸಮಿತಿಯ ಅಧ್ಯಕ್ಷರು ಹಾಗೂ ರಾಜ್ಯ ಸಮ್ಮೇಳನದ ಸಂಘಟನಾ ಸಮಿತಿಯ ಅಧ್ಯಕ್ಷರಾದ ಶ್ರೀನಿವಾಸ ರಾವ್ ಪಿ. ಬಿ. ವಹಿಸಿದ್ದರು. ಸಭೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಅಧ್ಯಕ್ಷರಾದ ಎಸ್. ವಿ. ಭಟ್, ಕನ್ನಡ ಅಧ್ಯಾಪಕರ ಸಂಘದ ಪೂರ್ವ ಅಧಿಕೃತ ವಕ್ತಾರರಾದ ವಿಶಾಲಾಕ್ಷ ಪುತ್ರಕಳ, ಕೇಂದ್ರ ಸಮಿತಿಯ ಉಪಾಧ್ಯಕ್ಷೆ ಪ್ರಭಾವತಿ ಕೆದಿಲಾಯ, ಕೋಶಾಧಿಕಾರಿ ಪದ್ಮಾವತಿ ಎಂ, ಮಂಜೇಶ್ವರ ಉಪಜಿಲ್ಲಾ ಘಟಕದ ಅಧ್ಯಕ್ಷರಾದ ಉಮೇಶ್ ಕೆ, ಬೇಕಲ-ಹೊಸದುರ್ಗ ಉಪಜಿಲ್ಲಾ ಘಟಕದ ಅಧ್ಯಕ್ಷರಾದ ರಜನಿ ಕುಮಾರಿ ಪಿ, ಕಾಸರಗೋಡು ಉಪಜಿಲ್ಲಾ ಘಟಕದ ಅಧ್ಯಕ್ಷರಾದ ವಿನೋದ್ ರಾಜ್ ಪಿ. ಕೆ, ಉಪಸ್ಥಿತರಿದ್ದರು.ರಾಜ್ಯ ಸಮ್ಮೇಳನ ಹಾಗೂ ರಜತ ಮಹೋತ್ಸವದ ಕಾರ್ಯಕ್ರಮಗಳ ಬಗ್ಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಯಿತು.
ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಜಯಪ್ರಶಾಂತ್ ಪಾಲೆಂಗ್ರಿ ಸ್ವಾಗತಿಸಿ, ಸಂಘಟನಾ ಕಾರ್ಯದರ್ಶಿ ಪ್ರದೀಪ್ ಕುಮಾರ್ ಶೆಟ್ಟಿ ವಂದಿಸಿದರು.
No comments:
Post a Comment