ಕಾಸರಗೋಡಿನ ಕನ್ನಡ ಮಾಧ್ಯಮ ಅಧ್ಯಾಪಕರ ಅತೀ ದೊಡ್ಡ ಸಂಘಟನೆಯಾದ ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘವು 25 ವರುಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ರಾಜ್ಯ ಸಮ್ಮೇಳನ ಹಾಗೂ ರಜತ ಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಇದರಂಗವಾಗಿ ಆಮಂತ್ರಣ ಪತ್ರಿಕೆ ಹಾಗೂ ಪೋಸ್ಟರ್ ಬಿಡುಗಡೆ ಕಾರ್ಯಕ್ರಮವು ಉಪ್ಪಳದಲ್ಲಿ ಇಂದು ನಡೆಸಲಾಯಿತು.
ಆಮಂತ್ರಣ ಪತ್ರಿಕೆಯನ್ನು ಸಂಘಟನೆಯ ಸಕ್ರಿಯ ಕಾರ್ಯಕರ್ತೆಯಾಗಿದ್ದ ನಿವೃತ್ತ ಶಿಕ್ಷಕಿ, ಗೈಡ್ ನ ಜಿಲ್ಲಾ ಕಮಿಷನರ್ ಆಗಿರುವ ಶ್ರೀಮತಿ ಶ್ರೀಕುಮಾರಿ ಯವರು ಬಿಡುಗಡೆ ಮಾಡಿದರು. ಪೋಸ್ಟರ್ ನ್ನು ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಕೇಂದ್ರ ಸಮಿತಿಯ ಅಧ್ಯಕ್ಷರಾದ ಶ್ರೀ ಶ್ರೀನಿವಾಸ ರಾವ್ ಪಿ. ಬಿ ರವರು ಪ್ರಧಾನ ಕಾರ್ಯದರ್ಶಿ ಜಯಪ್ರಶಾಂತ್ ಪಾಲೆಂಗ್ರಿ ಯವರಿಗೆ ಹಸ್ತಾಂತರಿಸುವ ಮೂಲಕ ಅನಾವರಣಗೊಳಿಸಿದರು. ಕಾರ್ಯಕ್ರಮದಲ್ಲಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಶ್ರೀ ಪ್ರದೀಪ್ ಕುಮಾರ್ ಶೆಟ್ಟಿ, ಸದಸ್ಯೆ ಶ್ರೀಮತಿ ಸುನಿತಾ, ಮಂಜೇಶ್ವರ ಉಪಜಿಲ್ಲಾ ಘಟಕದ ಅಧ್ಯಕ್ಷರಾದ ಶ್ರೀ ಉಮೇಶ್ ಕೆ, ಕಾರ್ಯದರ್ಶಿ ಶ್ರೀಮತಿ ಕವಿತಾ ಕೂಡ್ಲು, ಕೋಶಾಧಿಕಾರಿ ಶ್ರೀ ಜೀವನ್ ಕುಮಾರ್, ಸದಸ್ಯರಾದ ಶ್ರೀಮತಿ ದಯಾವತಿ ಸಾಲ್ಯಾನ್, ಶ್ರೀಮತಿ ಪುಷ್ಪಲತ, ಶ್ರೀಮತಿ ಮಾಲತಿ, ಶ್ರೀಮತಿ ಜಯಶ್ರೀ ಉಪಸ್ಥಿತರಿದ್ದರು.ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ರಾಜ್ಯ ಸಮ್ಮೇಳನ ಹಾಗೂ ರಜತ ಮಹೋತ್ಸವ ಕಾರ್ಯಕ್ರಮವು ಇದೇ ತಿಂಗಳ 24 ಮತ್ತು 25 ರಂದು ಕಾಸರಗೋಡು ನಗರಸಭಾ ಸಭಾಂಗಣದಲ್ಲಿ ನಡೆಯಲಿದ್ದು, ಕಾರ್ಯಕ್ರಮದ ಯಶಸ್ಸಿಗೆ ಕರೆ ನೀಡಲಾಗಿದೆ.
No comments:
Post a Comment