'ಕನ್ನಡ ಕೊರಳಿನ ಕರೆಯಾಗದೆ, ಕರುಳಿನ ಕರೆಯಾದಾಗ ಮಾತ್ರ ಭಾಷೆ ಭಾಸವಾಗುತ್ತದೆ, ಭಾಷೆ ಬಾಳಾಗುತ್ತದೆ' ಎಂದು ಖ್ಯಾತ ಚಿಂತಕರು, ವಿಮರ್ಶಕರೂ ಆಗಿರುವ ಅರವಿಂದ ಚೊಕ್ಕಾಡಿ ಯವರು ಹೇಳಿದರು.
ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ರಜತ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡುತ್ತಾ, ಶಿಕ್ಷಕರು ಎದುರಿಸುತ್ತಿರುವ ಪ್ರಚಲಿತ ಸಮಸ್ಯೆಗಳ ಕುರಿತು ಕ್ಷ-ಕಿರಣವನ್ನು ಬೀರಿದರು.
ಕಾರ್ಯಕ್ರಮದಲ್ಲಿ ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಅಧ್ಯಕ್ಷರಾದ ಶ್ರೀನಿವಾಸ ರಾವ್ ಪಿ. ಬಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಎಸ್. ಎಸ್. ಕೆ ಕಾಸರಗೋಡು ಜಿಲ್ಲಾ ಯೋಜನಾಧಿಕಾರಿಯಾದ ನಾರಾಯಣ ದೇಲಂಪಾಡಿ, ನಗರಸಭಾ ಸದಸ್ಯೆ ವೀಣಾ ಅರುಣ್, ಸಾಹಿತಿ, ಪತ್ರಕರ್ತರೂ ಆಗಿರುವ ರಾಧಾಕೃಷ್ಣ ಉಳಿಯತ್ತಡ್ಕ, ಕಾಸರಗೋಡು ಉಪಸ್ಥಿತರಿದ್ದರು. ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಸಂಘಟನಾ ಕಾರ್ಯದರ್ಶಿ ಪ್ರದೀಪ್ ಕುಮಾರ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ನಿವೃತ್ತರಾದ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಈ ಹಿಂದಿನ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿ ಹಾಗೂ ಕೋಶಾಧಿಕಾರಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮ ನಡೆಯಿತು.
ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಕಾರ್ಯದರ್ಶಿ ಡಾ. ಶ್ರೀಶ ಕುಮಾರ ಪಿ ಸ್ವಾಗತಿಸಿ, ಪ್ರಭಾವತಿ ಕೆದಿಲಾಯ ವಂದಿಸಿದರು. ಮಂಜೇಶ್ವರ ಉಪಜಿಲ್ಲಾ ಘಟಕದ ಕಾರ್ಯದರ್ಶಿ ಕವಿತಾ ಕೂಡ್ಲು ಕಾರ್ಯಕ್ರಮ ನಿರೂಪಿಸಿದರು.
ಬಳಿಕ ನಡೆದ ವಿಚಾರ ಗೋಷ್ಠಿಯಲ್ಲಿ ಅಧ್ಯಕ್ಷತೆಯನ್ನು ನಿವೃತ್ತ ಜಿಲ್ಲಾ ಶಿಕ್ಷಣಾಧಿಕಾರಿಗಳಾದ ರಮೇಶ್ ಕೆ ವಹಿಸಿದ್ದರು. ನಿವೃತ್ತ ಕಾಸರಗೋಡು ಜಿಲ್ಲಾ ಶಿಕ್ಷಣಾಧಿಕಾರಿ ಎನ್. ಕೆ. ಮೋಹನ್ ದಾಸ್ ಹಾಗೂ ನಿವೃತ್ತ ಅಧ್ಯಾಪಕ ವಿಶಾಲಾಕ್ಷ ಪುತ್ರಕಳ ರವರು ಕಾಸರಗೋಡಿನ ಕನ್ನಡಿಗರು ಹಾಗೂ ಕನ್ನಡ ಸಂಘಟನೆಗಳ ಕುರಿತಾದ ವಿಚಾರ ಮಂಡನೆ ಮಾಡಿದರು. ಕಾರ್ಯಕ್ರಮವನ್ನು ದಿವಾಕರ- ಬಲ್ಲಾಳ್ ಎ. ಬಿ ಸ್ವಾಗತಿಸಿ, ಮಂಜೇಶ್ವರ ಉಪಜಿಲ್ಲಾ ಘಟಕದ ಕೋಶಾಧಿಕಾರಿ ಜೀವನ್ ಕುಮಾರ್ ವಂದಿಸಿದರು.
ಸಂಜೆ ನಡೆದ ಸಮಾರೋಪ ಸಮಾರಂಭವನ್ನು ಕರ್ನಾಟಕ ಸಮಿತಿಯ ಅಧ್ಯಕ್ಷರಾದ ಮುರಳೀಧರ ಬಳ್ಳಕ್ಕುರಾಯ ಉದ್ಘಾಟಿಸಿದರು. ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಅಧ್ಯಕ್ಷರಾದ ಶ್ರೀನಿವಾಸ ರಾವ್ ಪಿ. ಬಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ನಿವೃತ್ತ ಜಿಲ್ಲಾ ಶಿಕ್ಷಣ ಉಪ ನಿರ್ದೇಶಕರಾದ ಡಿ. ಮಹಾಲಿಂಗೇಶ್ವರ ರಾಜ್, ನಿವೃತ್ತ ಜಿಲ್ಲಾ ಶಿಕ್ಷಣಾಧಿಕಾರಿಯಾದ ಸತ್ಯನಾರಾಯಣ ಕೆ, ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಮಾಜಿ ಅಧ್ಯಕ್ಷರುಗಳಾದ ಸತೀಶ್ ಕೆ, ಟಿ. ಡಿ. ಸದಾಶಿವ ರಾವ್, ಮಹಾಲಿಂಗೇಶ್ವರ ಭಟ್ ಎಂ. ವಿ, ವಿಶಾಲಾಕ್ಷ ಪುತ್ರಕಳ ಉಪಸ್ಥಿತರಿದ್ದರು. ಸಂಘಟನೆಯ ಠರಾವನ್ನು ಸಂಘಟನಾ ಕಾರ್ಯದರ್ಶಿ ಪ್ರದೀಪ್ ಕುಮಾರ್ ಶೆಟ್ಟಿ ಮಂಡಿಸಿದರು. ಇದೇ ಸಂದರ್ಭದಲ್ಲಿ ರಜತ ಮಹೋತ್ಸವದ ಅಂಗವಾಗಿ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ನಡೆಸಲಾಯಿತು. ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಉಪಾಧ್ಯಕ್ಷರಾದ ಸುಕೇಶ್ ಎ ಸ್ವಾಗತಿಸಿ, ಕುಂಬಳೆ ಉಪಜಿಲ್ಲಾ ಘಟಕದ ಉಪಾಧ್ಯಕ್ಷರಾದ ರಾಜೇಶ್ ಉಬ್ರಂಗಳ ವಂದಿಸಿದರು. ಕಾರ್ಯದರ್ಶಿ ಪ್ರದೀಪ್ ಕೆ. ವಿ ಕಾರ್ಯಕ್ರಮ ನಿರೂಪಿಸಿದರು.
ರಜತ ಮಹೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ರಂಗಸಿರಿ ಸಾಂಸ್ಕೃತಿಕ ಪ್ರತಿಷ್ಠಾನ ಬದಿಯಡ್ಕದ ಸದಸ್ಯರಿಂದ ಯಕ್ಷಗಾನ ನಡೆಯಿತು.
No comments:
Post a Comment