ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ನೇತೃತ್ವದಲ್ಲಿ ಇತ್ತೀಚೆಗೆ ಲೋಕ ಸೇವಾ ಆಯೋಗ ನಡೆಸಿದ ಎಲ್. ಪಿ. ಎಸ್. ಎ ಪರೀಕ್ಷೆಯ ಪ್ರಶ್ನೆ ಪತ್ರಿಕೆಯಲ್ಲಿ ಆದಂತಹ ಗೊಂದಲದ ಬಗ್ಗೆ ಚರ್ಚೆ ನಡೆಸಲು ಈ ಪರೀಕ್ಷೆಯನ್ನು ಎದುರಿಸಿದ ಪರೀಕ್ಷಾರ್ಥಿಗಳ ಜೊತೆ ಸಭೆ ನಡೆಸಲಾಯಿತು. ಸಭೆಯಲ್ಲಿ ಅಧ್ಯಕ್ಷತೆಯನ್ನು ಕನ್ನಡ ಅಧ್ಯಾಪಕರ ಸಂಘದ ಅಧ್ಯಕ್ಷರಾದ ಶ್ರೀ ಶ್ರೀನಿವಾಸ ರಾವ್ ಪಿ. ಬಿ. ವಹಿಸಿದ್ದರು. ಪಿ. ಎಸ್. ಸಿ. ಕುರಿತಾದ ಮಾಹಿತಿ ನೀಡಲು ತಿರುವನಂತಪುರದ ಲೋಕ ಸೇವಾ ಆಯೋಗದ ಇಲಾಖೆಯಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಶ್ರೀ ಗಣೇಶ್ ಪ್ರಸಾದ್ ಪಾಣೂರು ರವರು ಮುಖ್ಯ ಅತಿಥಿಯಾಗಿ ಆಗಮಿಸಿ, ಪರೀಕ್ಷೆಯನ್ನು ಎದುರಿಸಿದ ಪರೀಕ್ಷಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ, ಮಾಹಿತಿಯನ್ನು ನೀಡಿದರು.
ಸಭೆಯಲ್ಲಿ ಕನ್ನಡ ಅಧ್ಯಾಪಕರ ಸಂಘದ ಉಪಾಧ್ಯಕ್ಷರಾದ ಶ್ರೀ ಸುಕೇಶ್ ಎ, ಕೋಶಾಧಿಕಾರಿ ಶ್ರೀಮತಿ ಪದ್ಮಾವತಿ ಎಂ ಉಪಸ್ಥಿತರಿದ್ದರು.
ಸಂಘಟನೆಯ ಪ್ರಧಾನ ಕಾರ್ಯದರ್ಶಿ ಶ್ರೀ ಜಯಪ್ರಶಾಂತ್ ಪಾಲೆಂಗ್ರಿ ಸ್ವಾಗತಿಸಿ, ಸಂಘಟನಾ ಕಾರ್ಯದರ್ಶಿ ಪ್ರದೀಪ್ ಕುಮಾರ್ ಶೆಟ್ಟಿ ಧನ್ಯವಾದವನ್ನಿತ್ತರು.
No comments:
Post a Comment