ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘಟನೆ ಕಾಸರಗೋಡು ಇದರ ಕೇಂದ್ರ ಸಮಿತಿಯ ಸಭೆಯಲ್ಲಿ ನಿವೃತ್ತ ಶಿಕ್ಷಣ ಉಪನಿರ್ದೇಶಕರಾದ ಶ್ರೀ ದಿನೇಶ್ ವಿ ಅವರಿಗೆ ನುಡಿ ನಮನ ಸಲ್ಲಿಸಲಾಯಿತು.
ಸಮಾರಂಭದ ಅಧ್ಯಕ್ಷತೆಯನ್ನು ಕೇಂದ್ರ ಸಮಿತಿ ಅಧ್ಯಕ್ಷರಾದ ಸುಕೇಶ್ ಎ. ವಹಿಸಿದ್ದರು. ಸಂಘಟನಾ ಕಾರ್ಯದರ್ಶಿ ಜಬ್ಬಾರ್ ಬಿ. ಹಾಗೂ ಮಂಜೇಶ್ವರ ಉಪಜಿಲ್ಲಾ ಅಧ್ಯಕ್ಷರಾದ ಜಯರಾಮ ಸಿ.ಎಚ್ ದಿನೇಶ್ ವಿ. ಅವರ ಸಾಧನೆಯನ್ನು ಸ್ಮರಿಸಿದರು. ಕೇಂದ್ರ ಸಮಿತಿ ಉಪಾಧ್ಯಕ್ಷೆ ಶ್ರೀಮತಿ ಶ್ರೀಲತಾ, ಬೇಕಲ ಹೊಸ ದುರ್ಗ ಉಪಜಿಲ್ಲಾ ಅಧ್ಯಕ್ಷೆ ಶ್ರೀಮತಿ ರಜನಿ, ಕಾಸರಗೋಡು ಕಾರ್ಯದರ್ಶಿ ಪೂರ್ಣಿಮಾ, ಕಾರ್ಯಕಾರಿ ಸದಸ್ಯರಾದ ವಿಜಯಕುಮಾರಿ, ಶಾಂತಾ ಉಪಸ್ಥಿತರಿದ್ದರು. ಕೇಂದ್ರ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುಮಾರ್ ಶೆಟ್ಟಿ ಬೇಳ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕೋಶಾಧಿಕಾರಿ ಶರತ್ ಕುಮಾರ್ ಯಂ. ವಂದಿಸಿದರು.
No comments:
Post a Comment